ಅಭ್ಯರ್ಥಿಗಳ ಆಯ್ಕೆ, ಚುನಾವಣೆ ಒತ್ತಡದ ನಡುವೆಯೂ ಐಪಿಎಲ್ ಪಂದ್ಯ ವೀಕ್ಷಿಸಿದ ಬೊಮ್ಮಾಯಿ, ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಐಪಿಎಲ್ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿದ್ದಾರೆ.

ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ಅವರೊಂದಿಗೆ ಸಿಎಂ ಆರ್‌ಸಿಬಿ ಪಂದ್ಯ ವೀಕ್ಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಗೋವಿಂದರಾಜು ಅವರು ಕೂಡ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯವನ್ನು ವೀಕ್ಷಿಸಿದ್ದಾರೆ.

ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.

ವಿಧಾನಸಭೆ ಚುನಾವಣೆ ಕಾವೇರಿತೊಡಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆದಿದೆ. ಚುನಾವಣೆ ಗೆಲುವಿನ ಕಾರ್ಯತಂತ್ರ, ಪ್ರಚಾರದ ಭರಾಟೆ ನಡುವೆಯೂ ನಾಯಕರು ಒತ್ತಡ ಮರೆತು ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.

https://twitter.com/siddaramaiah/status/1642564660556595203

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read