HomeSportsBig Update: ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯ, ಕೆಲವೇ ಕ್ಷಣದಲ್ಲಿ ಮಹತ್ವದ ಘೋಷಣೆ

Big Update: ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯ, ಕೆಲವೇ ಕ್ಷಣದಲ್ಲಿ ಮಹತ್ವದ ಘೋಷಣೆ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸುವ ಕುರಿತು ಕರ್ನಾಟಕ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಬಳಿಕ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆದಿಲ್ಲ.

ಗುರುವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಕುರಿತಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಕೆಎಸ್‌ಸಿಎ ಮತ್ತು ಆರ್‌ಸಿಬಿ ಪದಾಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿ, ಚರ್ಚಿಸಿದರು.

ಈ ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಜಿಬಿಎ ಆಯುಕ್ತ ಮಹೇಶ್ವರ್ ರಾವ್, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯ ಬಳಿಕ ಮಾತನಾಡಿದ ಡಾ.ಜಿ.ಪರಮೇಶ್ವರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಕುರಿತು ಚರ್ಚೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಡಾ.ಜಿ.ಪರಮೇಶ್ವರ ಜೊತೆ ಮುಖ್ಯಮಂತ್ರಿಗಳು ಈ ಕುರಿತು ಚರ್ಚಿಸಲಿದ್ದಾರೆ. ಬಳಿಕ ಎಲ್ಲಾ ಸಚಿವರ ಅಭಿಪ್ರಾಯವನ್ನು ಪಡೆದು ಷರತ್ತಿನ ಮೇಲೆ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲು ಅವಕಾಶ ನೀಡುವ ನಿರೀಕ್ಷೆ ಇದೆ.

ಕೆಲವು ದಿನಗಳ ಹಿಂದೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಇತರ ಪದಾಧಿಕಾರಿಗಳು ಡಾ.ಜಿ.ಪರಮೇಶ್ವರ ಅವರನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿದ್ದರು. ಆಗಲೂ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಕುರಿತು ಚರ್ಚೆ ನಡೆದಿತ್ತು.

ಈ ಕುರಿತು ಪೋಸ್ಟ್ ಹಾಕಿದ್ದ ಡಾ.ಜಿ.ಪರಮೇಶ್ವರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಸುವ ವಿಚಾರವಾಗಿ ಕೆಎಸ್‌ಸಿಎ ಹಾಗೂ ಆರ್‌ಸಿಬಿ ಪದಾಧಿಕಾರಿಗಳ ನಿಯೋಗವು ಇಂದು ನನ್ನನ್ನು ಸದಾಶಿವನಗರದ ಗೃಹಕಚೇರಿಯಲ್ಲಿ ಭೇಟಿ ಮಾಡಿತು‌.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಗತ್ಯ ಸುರಕ್ಷತೆ ಕೈಗೊಳ್ಳುವ ಕುರಿತಂತೆ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರ ವರದಿಯ ಶಿಫಾರಸುಗಳು ಹಾಗೂ ಜಿಬಿಎ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದ ಸಮಿತಿ‌ಯ ಶಿಫಾರಸುಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಫೆಬ್ರವರಿ 12ರಂದು ಸಭೆ ನಡೆಸಿ, ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದೆ‌ ಎಂದು ಹೇಳಿದ್ದರು.

ಆರ್‌ಸಿಬಿ ಐಪಿಎಲ್ ಗೆಲುವಿನ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ ನಡೆಸಲು ಸರ್ಕಾರ ನಿರ್ಬಂಧವನ್ನು ಹೇರಿದೆ. ಈ ನಿರ್ಬಂಧ ವಾಪಸ್‌ ಪಡೆದು ಐಪಿಎಲ್‌-2026ರ ಪಂದ್ಯಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೆಎಸ್‌ಸಿಎ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular