HomeKarnatakaಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಐಪಿಎಲ್ ದಿನಗಳಂದು ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಐಪಿಎಲ್ ದಿನಗಳಂದು ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನಗಳಂದು ನಮ್ಮ ಮೆಟ್ರೋ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಬಿಎಂಆರ್‌ಸಿಎಲ್ ಈ ಕುರಿತಾಗಿ ಮಾಹಿತಿ ನೀಡಿದೆ.

ಮಾರ್ಚ್ 25, 29 ಮತ್ತು ಏಪ್ರಿಲ್ 2 ರಂದು ರಾತ್ರಿ 11:30ರ ವರೆಗೆ ನಮ್ಮ ಮೆಟ್ರೋ ಅವಧಿಯನ್ನು ವಿಸ್ತರಿಸಲಾಗಿದೆ. ಅಲ್ಲದೆ, ಎಲ್ಲಾ ನಿಲ್ದಾಣಗಳಿಂದಲೂ ರಿಟರ್ನ್ ಪೇಪರ್ ಟಿಕೆಟ್ ಕೂಡ ಲಭ್ಯವಿರುತ್ತದೆ ಎಂದು ಹೇಳಲಾಗಿದೆ.

ಐಪಿಎಲ್ ಪಂದ್ಯ ನಡೆಯುವ ನಿಗದಿತ ದಿನಗಳಂದು ಪಂದ್ಯಗಳಿಗೆ ಬರುವ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ದರ 50 ರೂ. ಆಗಿದ್ದು, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುವ ಟಿಕೆಟ್ ಗಳು ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ನಿಂದ ಮಾನ್ಯವಾಗಿರುತ್ತವೆ. ರಾತ್ರಿ 8 ಗಂಟೆ ನಂತರ ದಿನದ ಸೇವೆ ಕೊನೆಗೊಳ್ಳುವವರೆಗೆ ಮಾತ್ರ ರಿಟರ್ನ್ ಟಿಕೆಟ್ ಬಳಸಬಹುದಾಗಿದೆ. ಎಂದಿನಂತೆ ಪ್ರಯಾಣಿಕರು ಕ್ಯೂಆರ್ ಕೋಡ್ ಟಿಕೆಟ್, ಸ್ಮಾರ್ಟ್ ಕಾರ್ಡ್, ಎನ್‌ಸಿಎಂಸಿ ಕಾರ್ಡುಗಳನ್ನು ಬಳಕೆ ಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular