HomeIndiaಲೋಕಸಭೆ ಚುನಾವಣೆ ಕಾರಣ ವಿದೇಶಕ್ಕೆ ಐಪಿಎಲ್ ಪಂದ್ಯಗಳ ಸ್ಥಳಾಂತರ ಇಲ್ಲ: ಸ್ಪಷ್ಟನೆ

ಲೋಕಸಭೆ ಚುನಾವಣೆ ಕಾರಣ ವಿದೇಶಕ್ಕೆ ಐಪಿಎಲ್ ಪಂದ್ಯಗಳ ಸ್ಥಳಾಂತರ ಇಲ್ಲ: ಸ್ಪಷ್ಟನೆ

ನವದೆಹಲಿ: ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯುವ ಕಾರಣ 17ನೇ ಆವೃತ್ತಿ ಐಪಿಎಲ್ ಪಂದ್ಯಗಳನ್ನು ವಿದೇಶಕ್ಕೆ ಸ್ಥಳಾಂತರ ಮಾಡಲಾಗುವುದು ಎನ್ನುವ ವದಂತಿಗಳನ್ನು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಳ್ಳಿ ಹಾಕಿದ್ದು, ಲೋಕಸಭೆ ಚುನಾವಣೆ ನಡೆವೆಯೂ ಐಪಿಎಲ್ ನ ಎಲ್ಲಾ ಪಂದ್ಯಗಳಿಗೆ ಭಾರತವೇ ಆತಿಥ್ಯ ವಹಿಸಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದು ಇಂಡಿಯನ್ ಪ್ರೀಮಿಯರ್ ಲೀಗ್ ಆಗಿದೆ. ದುಬೈ ಪ್ರೀಮಿಯರ್ ಲೀಗ್ ಅಲ್ಲ. ಎಲ್ಲಾ ಪಂದ್ಯಗಳನ್ನು ಭಾರತದಲ್ಲಿ ನಡೆಸಲಿದ್ದು, ಶೀಘ್ರವೇ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆ ಕಾರಣ ಐಪಿಎಲ್ ನ ಎರಡನೇ ಭಾಗ ಸ್ಥಳಾಂತರಗೊಳ್ಳಬಹುದು ಎಂದು ಹೇಳಲಾಗಿತ್ತು. ಇದನ್ನು ಅಲ್ಲ ಕಳೆದ ಅರುಣ್ ಧುಮಾಲ್, ಕೆಲವು ಪಂದ್ಯಗಳ ವೇಳಾಪಟ್ಟಿ ಈಗಾಗಲೇ ಪ್ರಕಟಿಸಲಾಗಿದೆ. ಮಾರ್ಚ್ 22 ರಿಂದ ಏಪ್ರಿಲ್ 7ರವರೆಗೂ 21 ಪಂದ್ಯಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular