BREAKING: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: 2026ರ IPL ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ನಡೆಯಲಿದೆ: ಡಿಸಿಎಂ ಮಾಹಿತಿ

ಬೆಂಗಳೂರು: ಆರ್.ಸಿ.ಬಿ ಅಭಿಮಾನಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಇನ್ಮುಂದೆ ಐಪಿಎಲ್ ಪಂದ್ಯಗಳು ಬೆಂಗಳೂರು ಬಿಟ್ಟು ಹೋಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, 2026ರ ಐಪಿಎಲ್ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ನಡೆಯಲಿವೆ. ಯಾವುದೇ ಕಾರಣಕ್ಕೂ ಐಪಿಎಲ್ ಪಂದ್ಯಗಳು ಬೇರೆಡೆ ಶಿಫ್ಟ್ ಆಗಲು ಬಿಡುವುದಿಲ್ಲ. ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದು ನಮ್ಮ ಬೆಂಗಳೂರಿನ ಹೆಮ್ಮೆ ಎಂದು ಹೇಳಿದರು.

ಕಳೆದ ಬಾರಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕ್ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿತ್ತು. ಅಂತಹ ಅವಗಢಗಳು ಮತ್ತೆ ಆಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಎಲ್ಲಾ ರೀತಿಯ ಎಚ್ಚರಿಕೆ ವಹಿಸಿಯೇ ಪಂದ್ಯ ನಡೆಸಲಾಗುವುದು ಎಂದರು.

ಇನ್ಮುಂದೆ ಯಾವುದೇ ಐಪಿಎಲ್ ಪಂದ್ಯಗಳು ಬೇರೆಡೆ ಸ್ಥಳಾಂತರವಾಗಲ್ಲ. 2026ರ ಐಪಿಎಲ್ ಪಂದ್ಯ ಚ್ನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read