ಬೆಂಗಳೂರು: ಐಪಿಎಲ್ ಉದ್ಘಾಟನಾ ಪಂದ್ಯದ ವೇಳೆ ಮೊಬೈಲ್ ಕಳ್ಳತನ ಮಾಡಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ ತಂಡಗಳ ನಡುವೆ ಐಪಿಎಲ್ ಉದ್ಘಾಟನಾ ಪಂದ್ಯ ನಡೆದಿತ್ತು. ಚಿನ್ನಸ್ವಾಅಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ಆಭಿಮಾನಿಗಳು ಸಾಗರೋಪಾದಿಯಲ್ಲಿ ಹರಿದುಬಂದಿದ್ದರು. ಉದ್ಘಾಟನಾ ಪಂದ್ಯದ ವೇಳೆ ಹಲವು ಪ್ರೇಕ್ಷಕರ ಮೊಬೈಲ್ ಕಳ್ಳತನವಾಗಿತ್ತು.
ಅಂದು ಮೊಬೈಲ್ ಕಳ್ಳತನ ಮಾಡಿದ್ದ ಕಳ್ಳನನ್ನು ಇಂದು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 21 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ.
ಅಪಿಎಲ್ ಉದ್ಘಾಟನಾ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ, ರಸ್ತೆ ಬದಿಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ. ಅಪ್ರಾಪ್ತರನ್ನು ಸೇರಿಸಿಕೊಂಡು ಕಳ್ಳತನ ಮಾಡುತ್ತಿರುವ ಬಗ್ಗೆಯೂ ತನಿಖೆಯಲ್ಲಿ ಬಯಲಾಗಿದೆ. ಆರೋಪಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ೧೨ ಪ್ರಕರಣಗಳು ದಾಖಲಾಗಿವೆ. ಕೆಲ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

