HomeKarnatakaಬಿ. ದಯಾನಂದ್‌ಗೆ ಡಿಜಿಪಿ ಹುದ್ದೆ; ISD ಮುಖ್ಯಸ್ಥರಾಗಿ ನೇಮಕ :ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬಿ. ದಯಾನಂದ್‌ಗೆ ಡಿಜಿಪಿ ಹುದ್ದೆ; ISD ಮುಖ್ಯಸ್ಥರಾಗಿ ನೇಮಕ :ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಬಿ. ದಯಾನಂದ್‌ ಅವರಿಗೆ ರಾಜ್ಯ ಸರ್ಕಾರ ಡಿಜಿಪಿ ಹುದ್ದೆಗೆ ಬಡ್ತಿ ನೀಡಿದೆ. ಇದರ ಜತೆಗೆ ಅವರನ್ನು ಆಂತರಿಕ ಭದ್ರತಾ ದಳ (ಐಎಸ್‌ಡಿ) ಮುಖ್ಯಸ್ಥರಾಗಿ ನೇಮಕ ಮಾಡಿದೆ.ಇದೇ ಆದೇಶದಲ್ಲಿ 4 ಐಎಎಸ್‌ ಹಾಗೂ 6 ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

2025ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಕರ್ತವ್ಯಲೋಪದ ಆರೋಪದಲ್ಲಿ ಅಂದಿನ ನಗರ ಪೊಲೀಸ್‌ ಆಯುಕ್ತರಾಗಿದ್ದ ಬಿ. ದಯಾನಂದ್‌ ಸೇರಿದಂತೆ ಮೂವರು ಐಪಿಎಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದರಿಂದ ದಯಾನಂದ್‌ ಅವರ ಡಿಜಿಪಿ ಹುದ್ದೆಯ ಬಡ್ತಿ ವಿಳಂಬವಾಗಿತ್ತು.ನಂತರ ಪ್ರಕರಣಕ್ಕೆ ಸಂಬಂಧಿಸಿದ ಇಲಾಖಾ ವಿಚಾರಣೆ ಪೂರ್ಣಗೊಂಡಿದ್ದು, ದಯಾನಂದ್‌ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. ಈ ಕುರಿತು ಸರ್ಕಾರ ಜುಲೈ 14ರಂದು ಆದೇಶ ಹೊರಡಿಸಿತ್ತು.

ಇದೀಗ 2025ರ ಸೆಪ್ಟೆಂಬರ್‌ 12ರಿಂದ ಅನ್ವಯವಾಗುವಂತೆ ದಯಾನಂದ್‌ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಜತೆಗೆ ಐಎಸ್‌ಡಿ ಮುಖ್ಯಸ್ಥರ ಜವಾಬ್ದಾರಿಯನ್ನೂ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಡಾ. ರಾಕೇಶ್‌ ಕುಮಾರ್ ಕೆ. ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಹುದ್ದೆಯಿಂದ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾಗಿ ನೇಮಿಸಲಾಗಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾಗಿದ್ದ ರಮೇಶ್‌ ಕೆ.ಎನ್. ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು (ಆರೋಗ್ಯ ಮತ್ತು ಶಿಕ್ಷಣ) ಹುದ್ದೆ ನೀಡಲಾಗಿದೆ.

ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು (ಚುನಾವಣೆ, ವಿಪತ್ತು ನಿರ್ವಹಣೆ ಮತ್ತು ಸಾರ್ವಜನಿಕ ಸಂಪರ್ಕ) ಹುದ್ದೆಗೆ ನೇಮಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿದ್ದ ವೆಂಕಟಾಚಲಪತಿ ಆರ್. ಅವರನ್ನು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರು (ಅಭಿವೃದ್ಧಿ) ಹುದ್ದೆಗೆ ವರ್ಗಾಯಿಸಲಾಗಿದೆ.

6 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ

ಬಸವಪ್ಪ ಕಲ್ಶೆಟ್ಟಿ ಅವರನ್ನು ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತ ಹುದ್ದೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಎಸ್. ರವಿ ಅವರಿಗೆ ದಾವಣಗೆರೆಯ ಕೊಟ್ಟೂರು-ಹರಿಹರ ರೈಲ್ವೆ ಬ್ರಾಡ್‌ಗೇಜ್‌ ನಿರ್ಮಾಣ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆ ನೀಡಲಾಗಿದೆ.

ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಶಾಲಂ ಹುಸೇನ್‌ ಅವರನ್ನು ಧಾರವಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಿಸಲಾಗಿದೆ.

ವಿಜಯಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಗುರುನಾಥ ಶಿವಪುತ್ರಪ್ಪ ಧಡ್ಡೆ ಅವರನ್ನು ಬಾಗಲಕೋಟೆಯ ಅಪ್ಪರ್ ಕೃಷ್ಣ ಪ್ರಾಜೆಕ್ಟ್‌ನ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಬೀದರ್‌ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮೊಹಮ್ಮದ್ ಶಕಿಲ್‌ ಅವರಿಗೆ ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಹುದ್ದೆ ನೀಡಲಾಗಿದೆ.

ಸವಣೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ವಿಜಯಕುಮಾರ್ ಎಚ್.ಬಿ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯಕ ಆಯುಕ್ತರು (ಚುನಾವಣೆ) ಹುದ್ದೆಗೆ ನೇಮಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular