HomeKarnatakaBREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ

BREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ

ಬೆಂಗಳೂರು: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಅಮೃತ್ ಪಾಲ್ ಅವರಿಗೆ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟಂಬರ್ 25 ರಂದು ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶದ ಪ್ರತಿ ಇಂದು ಜೈಲಿಗೆ ತಲುಪಿದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿತ್ತು. ಪ್ರಕರಣ ಸಂಬಂಧ ಕಳೆದ ಜುಲೈನಲ್ಲಿ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಕಾರಾಗೃಹದಲ್ಲಿದ್ದ ಅವರು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಜಾಮೀನು ದೊರೆತ ನಂತರವೂ ತನಿಖೆಗೆ ಸಹಕಾರ ನೀಡಬೇಕು. ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನಿಸಬಾರದು. ಸಾಕ್ಷಿಗಳು ಮತ್ತು ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಕೋರ್ಟ್ ಅನುಮತಿ ಇಲ್ಲದೆ ವಿದೇಶಕ್ಕೆ ಹೋಗಬಾರದು ಎಂದು ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular