ಭೀಕರ ಅಪಘಾತದಲ್ಲಿ IPS ಅಧಿಕಾರಿ ಹರ್ಷವರ್ಧನ್ ಸಾವು ; ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಭೀಕರ ರಸ್ತೆ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಮೃತಪಟ್ಟಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು , ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read