ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಅಮಾನತು ರದ್ದುಗೊಂಡಿದ್ದ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಥಳ ನಿಯೋಜನೆ ಮಾಡಿದೆ.
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಈ ಅಮಾನತು ಆದೇಶ ರದ್ದು ಮಾಡಿದ್ದ ಸರ್ಕಾರ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿದೆ.
ಬಿ. ದಯಾನಂದ್ ಅವರಿಗೆ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ನಿಯೋಜಿಸಲಾಗಿದೆ.
ಅಮಾನತು ರದ್ದುಗೊಂಡಿದ್ದ ಡಿಸಿಪಿ(ಕೇಂದ್ರ) ಶೇಖರ್ ಹೆಚ್.ಟಿ. ಅವರು ಈಗ ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ಆಗಿದ್ದಾರೆ. ಐಪಿಎಸ್ ಅಧಿಕಾರಿ ಶೇಖರ್ ಅವರನ್ನು ಗುಪ್ತಚರ ಇಲಾಖೆಯ ಎಸ್ಪಿ ಹುದ್ದೆಗೆ ನಿಯೋಜನೆ ಮಾಡಲಾಗಿದೆ.