HomeKarnatakaಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಿರಿಯ IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಿರಿಯ IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಐಎ ಎಸ್ ಅಧಿಕಾರಿಗಳ ಬೆನ್ನಲೇ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಸೇರಿದಂತೆ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ. ಗುಪ್ತಚರ ವಿಭಾಗದ ಲಾಬೂರಾಮ್ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ಅವರನ್ನು ಸಿಐಡಿ ಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರಿಗೆ ಸಿಐಡಿ (ಸೈಬರ್ ಅಪರಾಧಗಳು) ಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular