ರಾಮನಗರ: ರಾಮನಗರದ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಕ್ಬಾಲ್ ಹುಸೇನ್ ಅವರಿಗೆ ಹೃದಯದ ಬ್ಲಾಕೇಜ್ ನಿಂದ ಅನಾರೋಗ್ಯವುಂಟಾಗಿದ್ದು, ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರಿಂದ ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದರು. ಅಲ್ಲದೇ ವೈದ್ಯರ ತಂಡದಿಂದ ಮಾಹಿತಿ ಪಡೆದರು.

