HomeInternationalಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಫೋಟ: 51 ಜನ ಸಾವು

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಫೋಟ: 51 ಜನ ಸಾವು

ಇರಾನ್‌ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ ಸಂಭವಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್‌ನ ರಾಜ್ಯ ಮಾಧ್ಯಮ ಭಾನುವಾರ ತಿಳಿಸಿದೆ.

ಮದಂಜೂ ಕಂಪನಿಯು ನಡೆಸುತ್ತಿರುವ ಗಣಿಯಲ್ಲಿರುವ ಬಿ ಮತ್ತು ಸಿ ಎರಡು ಬ್ಲಾಕ್‌ಗಳಲ್ಲಿ ಮೀಥೇನ್ ಅನಿಲ ಸ್ಫೋಟದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದೆ.

ದೇಶದ ಕಲ್ಲಿದ್ದಲಿನ 76% ಈ ಪ್ರದೇಶದಿಂದ ಒದಗಿಸಲಾಗಿದೆ. ಮದಂಜೂ ಕಂಪನಿ ಸೇರಿದಂತೆ ಸುಮಾರು 8 ರಿಂದ 10 ದೊಡ್ಡ ಕಂಪನಿಗಳು ಈ ಪ್ರದೇಶದಲ್ಲಿ ಕೆಲಸ ಮಾಡುತ್ತಿವೆ ಎಂದು ದಕ್ಷಿಣ ಖೊರಾಸನ್ ಪ್ರಾಂತ್ಯದ ಗವರ್ನರ್ ಅಲಿ ಅಕ್ಬರ್ ರಹೀಮಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ ಬ್ಲಾಕ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಬ್ಲಾಕ್‌ನಲ್ಲಿದ್ದ 47 ಕಾರ್ಮಿಕರಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ರಹೀಮಿ ಹೇಳಿದ್ದಾರೆ.

ಇರಾನ್‌ನ ಹೊಸ ಸುಧಾರಣಾವಾದಿ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಗಾಗಿ ನ್ಯೂಯಾರ್ಕ್‌ಗೆ ಪ್ರಯಾಣಿಸಲು ತಯಾರಿ ನಡೆಸುತ್ತಿದ್ದಾರೆ. ಸಿಕ್ಕಿಬಿದ್ದವರನ್ನು ರಕ್ಷಿಸಲು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಆದೇಶಿಸಿದ್ದಾರೆ.

ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ. ನಾನು ಮಂತ್ರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಪೆಜೆಶ್ಕಿಯಾನ್ ತಿಳಿಸಿದ್ದಾರೆ.

ತೈಲ ಉತ್ಪಾದಿಸುವ ಇರಾನ್ ಕೂಡ ವಿವಿಧ ಖನಿಜಗಳಿಂದ ಸಮೃದ್ಧವಾಗಿದೆ. ಇರಾನ್ ವಾರ್ಷಿಕವಾಗಿ ಸುಮಾರು 3.5 ಮಿಲಿಯನ್ ಟನ್ ಕಲ್ಲಿದ್ದಲನ್ನು ಬಳಸುತ್ತದೆ. ಆದರೆ, ವರ್ಷಕ್ಕೆ ಅದರ ಗಣಿಗಳಿಂದ ಕೇವಲ 1.8 ಮಿಲಿಯನ್ ಟನ್ ಗಳಷ್ಟು ಮಾತ್ರ ಹೊರತೆಗೆಯುತ್ತದೆ. ಉಳಿದವುಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular