HomeKarnatakaಇರಾನ್ ಮೇಲೆ ಅಮೆರಿಕದ ರಾಳಿ ಅನಗತ್ಯವಾದದ್ದು: ಸಿದ್ದರಾಮಯ್ಯ

ಇರಾನ್ ಮೇಲೆ ಅಮೆರಿಕದ ರಾಳಿ ಅನಗತ್ಯವಾದದ್ದು: ಸಿದ್ದರಾಮಯ್ಯ

“ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ” ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.

“ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ” ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ” ಎಂದು ತಿಳಿಸಿದರು.

“ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ” ಎಂದರು.

ಕನ್ನಡಿಗರ ಜೊತೆ ಮಾತು: “ಇಸ್ರೇಲ್ – ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular