HomeKarnatakaಇರಾನ್-ಇಸ್ರೇಲ್ ಸಂಘರ್ಷ; ದುಬೈನಲ್ಲಿ ಸಿಲುಕಿದ 50 ದಾವಣಗೆರೆ ಪ್ರವಾಸಿಗರು

ಇರಾನ್-ಇಸ್ರೇಲ್ ಸಂಘರ್ಷ; ದುಬೈನಲ್ಲಿ ಸಿಲುಕಿದ 50 ದಾವಣಗೆರೆ ಪ್ರವಾಸಿಗರು

ಇಸ್ರೇಲ್–ಇರಾನ್ ನಡುವಣ ಉದ್ವಿಗ್ನ ಪರಿಸ್ಥಿತಿ ಕಾರಣ ಮಧ್ಯಪ್ರಾಚ್ಯ ದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನಗಳ ಹಾರಾಟ ರದ್ದಾಗಿದ್ದು ದುಬೈ ಸೇರಿದಂತೆ ಹಲವು ಕಡೆ ಭಾರತದ ನೂರಾರು ಜನರು ಸಿಲುಕಿದ್ದಾರೆ.

ದುಬೈನಲ್ಲಿ ಕರ್ನಾಟಕದ ದಾವಣಗೆರೆ ಮೂಲದ 50 ಪ್ರವಾಸಿಗರು ಸಿಲುಕಿದ್ದಾರೆ. ಈ ಕುರಿತು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದ, ಅವರನ್ನು ಸುರಕ್ಷಿತವಾಗಿ ಕರೆತರುವಂತೆ ವಿದೇಶಾಂಗ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ.

ಈ ಕುರಿತು ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ 50 ಭಾರತೀಯ ಪ್ರವಾಸಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ದಾವಣಗೆರೆ ಜಿಲ್ಲೆಯ ಪ್ರವಾಸಿಗರ ತಂಡವು 23-02-2026 ರಂದು ಬೆಂಗಳೂರಿನಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪ್ರವಾಸಕ್ಕೆ ತೆರಳಿದ್ದರು. ಒಟ್ಟು 50 ಮಂದಿ ಪ್ರವಾಸಿಗರಲ್ಲಿ 15 ಮಂದಿ ಜಗಳೂರು ತಾಲ್ಲೂಕಿನವರಾಗಿದ್ದು, ಉಳಿದ 35 ಮಂದಿ ನೆರೆಯ ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳವರಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಇವರ ವಾಪಸಿ ವಿಮಾನವು 28-02-2026 ರಂದು ರಾತ್ರಿ 9:30ಕ್ಕೆ ನಿಗದಿಯಾಗಿದ್ದರೂ, ಅಂತಿಮ ಕ್ಷಣದಲ್ಲಿ ವಿಮಾನ ರದ್ದುಗೊಂಡಿರುವುದರಿಂದ ಪ್ರವಾಸಿಗರು ದುಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ.  ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿ ಕಾರಣದಿಂದ ವಿಮಾನ ಸೇವೆಗಳು ವ್ಯತ್ಯಯಗೊಂಡಿರುವುದು ತಿಳಿದುಬಂದಿದೆ’ ಎಂದು ಹೇಳಿದ್ದಾರೆ.

‘ಪ್ರವಾಸಿಗರ ಸುರಕ್ಷತೆ ಹಾಗೂ ಶೀಘ್ರ ವಾಪಸಿಗಾಗಿ ಭಾರತ ಸರ್ಕಾರ ತುರ್ತು ಹಸ್ತಕ್ಷೇಪ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಹಾಗೂ ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ಸಂಯೋಜನೆ ನಡೆಸಿ, ಸಿಲುಕಿರುವ ನಾಗರಿಕರನ್ನು ಬೇಗನೇ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular