HomeLatest NewsBIG NEWS: ಆಪರೇಷನ್ ಸಿಂಧು: ಇರಾನ್ ನಿಂದ ತಾಯ್ನಾಡಿಗೆ ಬಂದಿಳಿದ 517 ಭಾರತೀಯರು

BIG NEWS: ಆಪರೇಷನ್ ಸಿಂಧು: ಇರಾನ್ ನಿಂದ ತಾಯ್ನಾಡಿಗೆ ಬಂದಿಳಿದ 517 ಭಾರತೀಯರು

ನವದೆಹಲಿ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧದ ಸಂಘರ್ಷ ಮುಂದುವರೆದಿರುವ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧು ಮೂಲಕ ಇರಾನ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ನಡೆಯುತ್ತಿದೆ.

ಇರಾನ್ ನಲ್ಲಿರುವ 500ಕ್ಕೂ ಅಧಿಕ ಭಾರತೀಯರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಇಸ್ರೇಲ್ ಜೊತೆಗಿನ ಸಂಘರ್ಷದಿಂದಾಗಿ ಇರಾಅನ್ ನಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ವಿದ್ಯಾರ್ಥಿಗಳು ಸೇರಿದಂತೆ ಹಲವು ಭಾರತೀಯರು ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ್ದಾರೆ. ಆಪರೇಷನ್ ಸಿಂಧು ವಿಮಾನ ಭಾರತೀಯ ನಾಗರಿಕರನ್ನು ಕರೆತಂದಿದೆ. ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರುಣ್ ಚಟರ್ಜಿ ಅವರನ್ನು ಬರಮಾಡಿಕೊಂಡಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈವರೆಗೆ ಇರಾನ್ ನಲ್ಲಿರುವ ಒಟ್ಟು 517 ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular