ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ. ಇಂಥವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರಿಸುವ ನಮ್ಮ ನಾಯಕರು ಬಾರಿ ಬೆಲೆ ತೆರಬೇಕಾದೀತು ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಯಾರ ಹೆಸರನ್ನು ಅವರು ಉಲ್ಲೇಖಿಸದೇ ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.
ವಿರೋಧಪಕ್ಷದ ಶಾಸಕರೊಬ್ಬರು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಟೀಕಿಸುವವರು ತಮ್ಮದೇ ಪಕ್ಷದ ಸಂಸದರನ್ನು ಅದೇ ಕಾರ್ಯಕ್ರಮದಲ್ಲಿ ಕರೆದೊಯ್ಯದ ಬಗ್ಗೆ ಜನ ಏನೆಂದಾರು ಎಂಬ ಕನಿಷ್ಠ ಜ್ಞಾನವಿರಬೇಕು ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ಶಾಸಕರೊಬ್ಬರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಮಾತನಾಡುವ ನಮಗೆ ನಮ್ಮದೇ ಪಕ್ಷದ ಸ್ಥಳೀಯ ಸಂಸದರನ್ನು ಅದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜೊತೆಗೂಡಿಸಿಕೊಂಡು ಹೋಗದಿರುವ ನಮ್ಮ ಹೃದಯ ವೈಶಾಲ್ಯತೆಗೆ ಜನ ಏನಂದಾರು ? ಎಂಬ ಕನಿಷ್ಠ ಜ್ಞಾನವಿರಬೇಕು.
ನಮ್ಮ ಕುಟುಂಬದ ಸದಸ್ಯರು, ನಮ್ಮ ಕಚೇರಿ ಸಿಬ್ಬಂದಿಗಳು ಸರ್ಕಾರಿ ಯೋಜನೆಗಳ ಅಡಿಗಲ್ಲು, ಉದ್ಘಾಟನೆ ಮಾಡಬಹುದು. ಆದರೆ, ನಾನು ಹೋದಲೆಲ್ಲಾ ಪಕ್ಷ ಬದಲಾಯಿಸಿದಾಗ ನನ್ನ ಜೊತೆಗಿರುವ ನನ್ನ ಬೆಂಬಲಿಗರು ಚುನಾಯಿತ ಪ್ರತಿನಿಧಿಗಳಾಗಿದ್ದರೂ ಕೂಡ ಅವರಿಗೆ ಅವಕಾಶ ನೀಡದಿರುವ ನಮ್ಮ ಬಗ್ಗೆ ಜನ ಏನಂದಾರು ? ಎಂಬ ಕನಿಷ್ಠ ವಿವೇಚನೆ ನಮಗಿರಬೇಕು.
ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು, ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಕೂಡ ಮನೆ ಹಾಕುವ ಅಗತ್ಯವಿಲ್ಲ. ಇಂಥವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರುವ ನಮ್ಮ ನಾಯಕರು ಬಾರಿ ಬೆಲೆ ತೆರಬೇಕಾದಿತು ಎಂದು ಟ್ವೀಟ್ ಮಾಡಿದ್ದಾರೆ.
https://twitter.com/Irannakadadi_MP/status/1631144381750349826
https://twitter.com/Irannakadadi_MP/status/1631144384380178432