‘ತಾಂತ್ರಿಕ ಕಾರಣಗಳಿಂದ’ ಗಂಟೆಗಳ ಕಾಲ ಸ್ಥಗಿತಗೊಂಡಿದ್ದ IRCTC ವೆಬ್‌ಸೈಟ್, ಮೊಬೈಲ್ ಆಪ್ ರಿಸ್ಟೋರ್ಡ್

ಮುಂಬೈ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್(IRCTC) ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಂಗಳವಾರ ಕೆಲವು ಗಂಟೆಗಳ ಕಾಲ ‘ತಾಂತ್ರಿಕ ಕಾರಣಗಳಿಂದ’ ಟಿಕೆಟ್ ಸೇವೆ ಲಭ್ಯವಿರಲಿಲ್ಲ. ನಂತರ ಬುಕಿಂಗ್ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆಯಿಂದಲೇ ಟಿಕೆಟ್ ಕಾಯ್ದಿರಿಸುವಲ್ಲಿ ಹಲವರು ಸಮಸ್ಯೆ ಎದುರಿಸಿದರು. IRCTC ಯ ಟಿಕೆಟ್ ಪಾಲುದಾರರ ಮೂಲಕ ಟಿಕೆಟ್ ಕಾಯ್ದಿರಿಸುವಾಗ ಕೆಲವು ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದೂರಿದ್ದಾರೆ.

ತಾಂತ್ರಿಕ ಕಾರಣಗಳಿಂದಾಗಿ, IRCTC ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಟಿಕೆಟ್ ಸೇವೆ ಲಭ್ಯವಿಲ್ಲ. CRIS(ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ) ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸುತ್ತಿದೆ ಎಂದು IRCTC ಟ್ವೀಟ್ ಮಾಡಿದೆ.

ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು Amazon, MakeMyTrip ಮುಂತಾದ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾಯ್ದಿರಿಸುವಂತೆ ಸಲಹೆ ನೀಡಿದೆ.

ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ಬೆಳಿಗ್ಗೆ 2.56 ರಿಂದ ಮಧ್ಯಾಹ್ನ 1.28 ರವರೆಗೆ ತಾಂತ್ರಿಕ ಸಮಸ್ಯೆ ಕಂಡುಬಂದಿದೆ ಎಂದು ಕೇಂದ್ರ ರೈಲ್ವೆ (ಸಿಆರ್) ವಕ್ತಾರರು ತಿಳಿಸಿದ್ದಾರೆ. ಮಧ್ಯಾಹ್ನ 1.28 ರಿಂದ ವೆಬ್‌ಸೈಟ್ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

IRCTC ವೆಬ್‌ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಟಿಕೆಟ್ ಕಾಯ್ದಿರಿಸಲು ಪ್ರಯತ್ನಿಸಿದಾಗ, ಅವರ ಖಾತೆಯಿಂದ ಹಣವನ್ನು ಕಡಿತಗೊಳಿಸಲಾಗಿದೆ. ಆದರೆ ಅವರ ಟಿಕೆಟ್‌ಗಳನ್ನು ಬುಕ್ ಮಾಡಲಾಗಿಲ್ಲ ಎಂದು ಕೆಲವರು ಹೇಳಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read