BIG NEWS: ಮಗ – ಸೊಸೆಯ ನಿರ್ಲಕ್ಷ್ಯ; ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಸರ್ಕಾರಕ್ಕೆ ಬರೆದ ವೃದ್ಧ…!

ಇಳಿ ವಯಸ್ಸಿನಲ್ಲಿ ತಮ್ಮನ್ನು ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸಿದ ಮಗ – ಸೊಸೆಯ ವರ್ತನೆಯಿಂದ ಮನನೊಂದ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ರಾಜ್ಯಪಾಲರ ಹೆಸರಿಗೆ ಬರೆದಿದ್ದಾರೆ.

ಇಂತಹದೊಂದು ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದ್ದು, 80 ವರ್ಷದ ನಾಥುಸಿಂಗ್ ತಮ್ಮೆಲ್ಲ ಆಸ್ತಿಯನ್ನು ಉತ್ತರ ಪ್ರದೇಶದ ರಾಜ್ಯಪಾಲರ ಹೆಸರಿಗೆ ಬರೆದಿದ್ದು, ತಮ್ಮ ನಿಧನಾ ನಂತರ ಆ ಜಾಗದಲ್ಲಿ ಶಾಲೆ ಅಥವಾ ಆಸ್ಪತ್ರೆ ನಿರ್ಮಿಸಲು ಮನವಿ ಮಾಡಿದ್ದಾರೆ.

ಪ್ರಸ್ತುತ ವೃದ್ಧಾಶ್ರಮದಲ್ಲಿ ವಾಸವಾಗಿರುವ ನಾಥುಸಿಂಗ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನ್ನನ್ನು ಮಗ – ಸೊಸೆ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಆಸ್ತಿಯ ಮೇಲೆ ಅವರ ಕಣ್ಣಿತ್ತು ಹೊರತು ನನ್ನ ಯೋಗಕ್ಷೇಮವಲ್ಲ ಎಂದು ನೋವಿನಿಂದ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read