HomeAgricultureರೈತರಿಂದ ರಾಗಿ ಖರೀದಿಯಲ್ಲಿ ಅಕ್ರಮ ನಡೆಸಿದರೆ ಹುಷಾರ್!

ರೈತರಿಂದ ರಾಗಿ ಖರೀದಿಯಲ್ಲಿ ಅಕ್ರಮ ನಡೆಸಿದರೆ ಹುಷಾರ್!

“ನೋಂದಣಿಯ ಜೇಷ್ಠತೆಯಂತೆ ರೈತರಿಂದ ಖರೀದಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ರಾಗಿ ತೆಗೆದುಕೊಳ್ಳಬೇಕು ಹಾಗೂ ದಿನಕ್ಕೆ ನಿಗದಿಪಡಿಸುವ ರೈತರಿಂದ ಮಾತ್ರ ಪಡೆಯಬೇಕು. ವ್ಯಾಪಾರಸ್ಥರು, ಮಧ್ಯವರ್ತಿಗೆ ಆದ್ಯತೆ ನೀಡಿದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು  ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.

“ಪ್ರತಿಯೊಂದು ಖರೀದಿ ಕೇಂದ್ರದಲ್ಲಿ ರಾಗಿಯ ಗುಣಮಟ್ಟವನ್ನು ಪರೀಕ್ಷೆ ಮಾಡಿಯೇ ತೆಗೆದುಕೊಳ್ಳಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ತೂಕದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು” ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಖರೀದಿ ಕೇಂದ್ರದಿಂದ ಗೋದಾಮಿಗೆ ಸ್ಥಳಾಂತರಿಸಲು ಟ್ರಕ್‌ಗಳ ಸಂಖ್ಯೆ ಕಡಿಮೆ ಇದೆ. ದಿನವಿಡೀ ರೈತರು ಕಾಯಬೇಕಾದ ಸ್ಥಿತಿ ಎದುರಾಗಿದೆ ಎಂದು ದೂರುಗಳು ಸಲ್ಲಿಕೆಯಾಗುತ್ತಿವೆ. ಆದ್ದರಿಂದ ಕೂಡಲೇ ಹೆಚ್ಚಿನ ಟ್ರಕ್‌ಗಳನ್ನು ಒದಗಿಸಬೇಕು” ಎಂದು ನಿರ್ದೇಶಿಸಿದರು.

“ಖರೀದಿ ಕೇಂದ್ರದ ಆವರಣದಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು ಹಾಗೂ ಅಗತ್ಯವಿದ್ದರೆ ಉಪಹಾರದ ವ್ಯವಸ್ಥೆಯನ್ನು ಸಹ ಮಾಡಬೇಕು. ಖರೀದಿ ಕೇಂದ್ರದ ಆವರಣದಲ್ಲಿ ಶೌಚಾಲಯ ವ್ಯವಸ್ಥೆ ಮಾಡಬೇಕು” ಎಂದು ಸೂಚಿಸಿದರು.

“ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಹೋಬಳಿಯ ಬೂಕನಬೆಟ್ಟ ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹಣ ನೀಡಿದರೆ ಮೊದಲು ಆದ್ಯತೆ ಮೇಲೆ ರಾಗಿ ಪಡೆಯುತ್ತಾರೆ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದರು.

“ಪ್ರತಿ ತಾಲೂಕುಗಳಲ್ಲಿ ತಹಶೀಲ್ದಾರ್‌ಗಳು ಕಡ್ಡಾಯವಾಗಿ ಮೇಲುಸ್ತುವಾರಿ ಮಾಡಬೇಕು ರೈತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು. ಮಳೆ ಬರುವ ಸಾಧ್ಯತೆ ಇದ್ದರೆ ಟಾರ್ಪಲ್ ವ್ಯವಸ್ಥೆಯನ್ನು ಮಾಡಬೇಕು ಹಾಗೂ ರೈತರ ವಾಹನದಿಂದ ಇಳಿಸಲು ಹೆಚ್ಚಿನ ಹಣವನ್ನು ಪಡೆಯುತ್ತಿದ್ದಾರೆ ಎಂಬ ಆರೋಪ ಪ್ರತಿನಿತ್ಯ ದಿನಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular