BREAKING : ಕರ್ನಾಟಕದ ಮುಂದಿನ ‘CM’ ನಟ ದರ್ಶನ್.? ಮೊಳಗಿದ ‘ಡಿ ಬಾಸ್’ ಅಭಿಮಾನಿಗಳ ಘೋಷಣೆ.!

ಬೆಂಗಳೂರು : ಬೆಂಗಳೂರು : ರಾಜ್ಯದಲ್ಲಿ ಮುಂದಿನ ಸಿಎಂ ಚರ್ಚೆ ಜೋರಾಗಿದೆ. ಇದರ ನಡುವೆ ಮುಂದಿನ ಸಿಎಂ ನಟ ದರ್ಶನ್ ಅಂತ ಡಿ ಬಾಸ್ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

ಹೌದು, ಇಂದು ರಾಜ್ಯಾದ್ಯಂತ ಡೆವಿಲ್ ಸಿನಿಮಾ ರಿಲೀಸ್ ಆಗಿದೆ. ಥಿಯೇಟರ್ ಎದುರು ದರ್ಶನ್ ಅಭಿಮಾನಿಗಳು ಹಬ್ಬ ಮಾಡ್ತಿದ್ದಾರೆ. ಡೆವಿಲ್ ಸಿನಿಮಾ ನೋಡಿ ಬಂದ ಅಭಿಮಾನಿಗಳು ‘ಮುಂದಿನ ಸಿಎಂ ದರ್ಶನ್’ ಎಂದು ಕೂಗಿ ಜೈಕಾರ ಹಾಕಿದ್ದಾರೆ.

ಡೆವಿಲ್ ಸಿನಿಮಾದಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುವ ದೃಶ್ಯವಿದೆ. ಇದನ್ನು ನೋಡಿಕೊಂಡು ಥಿಯೇಟರ್ ಹೊರಗಡೆ ಬಂದ ಫ್ಯಾನ್ಸ್ ದರ್ಶನ್ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ. ದರ್ಶನ್ ಜೈಲಿನಿಂದ ಹೊರಗಡೆ ಬಂದು ತಮಿಳು ನಟ ವಿಜಯ್ ಅವರಂತೆ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಈಗಾಗಲೇ ನಟ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಹಲವು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಅದೇನೆ ಇರಲಿ ದರ್ಶನ್ ಯಾವಾಗ ಜೈಲಿನಿಂದ ರಿಲೀಸ್ ಆಗ್ತಾರೆ.. ರಾಜಕೀಯಕ್ಕೆ ಎಂಟ್ರಿ ಕೊಡೋದು ಯಾವಾಗ ಎಂಬುದು ಸದ್ಯಕ್ಕಿರುವ ಕುತೂಹಲ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.ಬರೋಬ್ಬರಿ 300ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಎಲ್ಲಡೆ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದೆ.

ಡೆವಿಲ್ ಚಿತ್ರಕ್ಕೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳಗ್ಗೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದ್ದು, ಎಲ್ಲಾ ಶೋಗಳು ಹೌಸ್ ಫುಲ್ ಆಗಿದೆ.

ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read