ಹಾವೇರಿ: ಮಠಾಧೀಶರು ಹೇಳಿದಾಕ್ಷಣ ಮುಖ್ಯಮಂತ್ರಿ ಆಗಬೇಕೆಂದು ಸಂವಿಧಾನದಲ್ಲಿ ಇದೆಯಾ? ಸಂವಿಧಾನದಲ್ಲಿ ಅಂತಹ ಅವಕಾಶವಿದೆಯಾ ಎಂದು ಕಾಗಿನಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ಪ್ರಶ್ನಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ ಹೇಳಿಕೆಗೆ ನಿರಂಜನಾನಂದಪುರಿ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡುವುದು, ಸಿಎಂ ಆಯ್ಕೆ ಮಾಡುವ ಅಧಿಕಾರ ಶಾಸಕರಿಗೆ ಇದೆ. ಸಾಂವಿಧಾನಿಕವಾಗಿ ಶಾಸಕರಿಗೆ ಸಿಎಂ ಬದಲಾವಣೆ ಮಾಡುವ ಅಧಿಕಾರವಿದೆ. ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಶಾಸಕರು ನಿರ್ಣಯ ಮಾಡುತ್ತಾರೆ ಎಂದು ನಿರ್ಮಲಾನಂದನಾಥ ಶ್ರೀ ಹೇಳಿಕೆಗೆ ನಿರಂಜನಾನಂದಪುರಿ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಪಕ್ಷಗಳಿಗೂ ಸಾಕಷ್ಟು ನಾಯಕರನ್ನು ನಮ್ಮ ಮಠ ಕೊಟ್ಟಿದೆ. ಎರಡೂವರೆ ವರ್ಷದ ನಂತರ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ ಎನ್ನುವ ಭರವಸೆ ಇತ್ತು. ಆದರೆ ಅದು ಆಗುವ ಹಾಗೆ ಕಾಣುತ್ತಿಲ್ಲ ಎಂದು ಭಕ್ತರಿಂದ ಆತಂಕವಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಕಾಂಗ್ರೆಸ್ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ದುಡಿದಿದ್ದಾರೆ. ಅವರಿಗೆ ಅವಕಾಶ ಸಿಗಬೇಕು ಎನ್ನುವುದು ಎಲ್ಲರ ಕೋರಿಕೆಯಾಗಿದೆ. ಇನ್ನುಳಿದ ಅವಧಿಯನ್ನು ಡಿ.ಕೆ. ಶಿವಕುಮಾರ್ ಗೆ ಬಿಟ್ಟು ಕೊಡಬೇಕು ಎಂದು ಡಿಸಿಎಂ ಡಿಕೆ ಪರ ನಿರ್ಮಲಾನಂದನಾಥ ಸ್ವಾಮೀಜಿ ಬ್ಯಾಟ್ ಬೀಸಿದ್ದರು.
