HomeLatest Newsಇನ್ನು ದ್ವಿಚಕ್ರ ವಾಹನ ಖರೀದಿಸುವವರಿಗೆ ವಾಹನ ತಯಾರಕರೇ 2 ಹೆಲ್ಮೆಟ್ ಒದಗಿಸುವುದು ಕಡ್ಡಾಯ…?

ಇನ್ನು ದ್ವಿಚಕ್ರ ವಾಹನ ಖರೀದಿಸುವವರಿಗೆ ವಾಹನ ತಯಾರಕರೇ 2 ಹೆಲ್ಮೆಟ್ ಒದಗಿಸುವುದು ಕಡ್ಡಾಯ…?

ನವದೆಹಲಿ: ಸವಾರರ ಸುರಕ್ಷತೆ ದೃಷ್ಟಿಯಿಂದ ಹೊಸ ದ್ವಿಚಕ್ರ ವಾಹನ ಖರೀದಿಸುವವರಿಗೆ ವಾಹನ ತಯಾರಕರೇ ಎರಡು ಹೆಲ್ಮೆಟ್ ಒದಗಿಸುವುದನ್ನು ಕಡ್ಡಾಯಗೊಳಿಸುವ ಕುರಿತಾಗಿ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ಈ ನಿಯಮ ಜಾರಿಗೆ 1989ರ ಕೇಂದ್ರೀಯ ಮೋಟಾರ್ ವಾಹನ ನಿಯಮಗಳಲ್ಲಿ ಬದಲಾವಣೆ ಮಾಡುವ ಪ್ರಸ್ತಾವನೆಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಿಟ್ಟಿದೆ. ತಿದ್ದುಪಡಿ ಆದ ಹೊಸ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ಮೂರು ತಿಂಗಳೊಳಗೆ ಕಡ್ಡಾಯವಾಗುತ್ತದೆ.

ಜನವರಿ 1, 2026ರಿಂದ ಅನ್ವಯಿಸುವಂತೆ 50 ಸಿಸಿ ಇಂಜಿನ್ ಸಾಮರ್ಥ್ಯ ಅಥವಾ ಗಂಟೆಗೆ 50 ಕಿಲೋಮೀಟರ್ ಗಿಂತ ಹೆಚ್ಚಿನ ವೇಗಮಿತಿ ಹೊಂದಿರುವ ಮೋಟರ್ ಸೈಕಲ್ ಗಳ ಎಲ್ಲಾ ಹೊಸ ಎಲ್ 2 ವರ್ಗದ ದ್ವಿಚಕ್ರ ವಾಹನಗಳು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್ ಹೊಂದುವುದು ಕಡ್ಡಾಯ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular