BIG NEWS : ‘ಕಾವೇರಿ’ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್​ ಸರ್ಕಾರದ ಕಿಡಿಗೇಡಿತನದ ಪರಮಾವಧಿ : ಮಾಜಿ ಸಿಎಂ ‘HDK’ ವಾಗ್ಧಾಳಿ

ಬೆಂಗಳೂರು : ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರಕಾರದ ಕಿಡಿಗೇಡಿತನದ ಪರಮಾವಧಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

https://twitter.com/hd_kumaraswamy/status/1706516746092577085

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read