ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಅನುಮತಿ ಕೋರಿದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ.
ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲಾಗಿದೆ. ಟ್ರಾಫಿಕ್ ವೇಳೆ ಶೀಘ್ರ ಪ್ರಯಾಣಕ್ಕೆ ಬೈಕ್ ಟ್ಯಾಕ್ಸಿ ಉತ್ತಮ ಎಂದು ಬೈಕ್ ಟ್ಯಾಕ್ಸಿ ಪರ ವಕೀಲರು ವಾದ ಮಂಡಿಸಿದ್ದಾರೆ. ಅವರ ವಾದಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಮೋಟಾರು ವಾಹನ ಕಾಯ್ದೆಯಲ್ಲಿ ಅವಕಾಶವಿಲ್ಲವೆಂದು ಸರ್ಕಾರ ವಾದ ಮಂಡಿಸಿದೆ.
ಇದೇ ಕಾಯ್ದೆಯಡಿ ಬೇರೆ ರಾಜ್ಯಗಳು ಅನುಮತಿ ನೀಡಿವೆ. ಸರ್ಕಾರದ ಈ ವಾದ ಬಲವಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಪ್ರಜ್ಞಾಪೂರ್ವಕವಾಗಿ ಬೈಕ್ ಟ್ಯಾಕ್ಸಿಯನ್ನು ನಿರ್ಬಂಧಿಸಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಈ ಕುರಿತು ಪ್ರಶ್ನೆ ಮಾಡಿದ್ದು, ಮೇಲ್ಮನವಿ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಲಾಗಿದೆ.