HomeLatest Newsಪ್ರಜ್ಞಾಪೂರ್ವಕವಾಗಿ ಬೈಕ್ ಟ್ಯಾಕ್ಸಿಗೆ ನಿರ್ಬಂಧವೇ?: ಸರ್ಕಾರದ ಕ್ರಮ ಪ್ರಶ್ನಿಸಿದ ಹೈಕೋರ್ಟ್

ಪ್ರಜ್ಞಾಪೂರ್ವಕವಾಗಿ ಬೈಕ್ ಟ್ಯಾಕ್ಸಿಗೆ ನಿರ್ಬಂಧವೇ?: ಸರ್ಕಾರದ ಕ್ರಮ ಪ್ರಶ್ನಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಅನುಮತಿ ಕೋರಿದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ.

ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲಾಗಿದೆ. ಟ್ರಾಫಿಕ್ ವೇಳೆ ಶೀಘ್ರ ಪ್ರಯಾಣಕ್ಕೆ ಬೈಕ್ ಟ್ಯಾಕ್ಸಿ ಉತ್ತಮ ಎಂದು ಬೈಕ್ ಟ್ಯಾಕ್ಸಿ ಪರ ವಕೀಲರು ವಾದ ಮಂಡಿಸಿದ್ದಾರೆ. ಅವರ ವಾದಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಮೋಟಾರು ವಾಹನ ಕಾಯ್ದೆಯಲ್ಲಿ ಅವಕಾಶವಿಲ್ಲವೆಂದು ಸರ್ಕಾರ ವಾದ ಮಂಡಿಸಿದೆ.

ಇದೇ ಕಾಯ್ದೆಯಡಿ ಬೇರೆ ರಾಜ್ಯಗಳು ಅನುಮತಿ ನೀಡಿವೆ. ಸರ್ಕಾರದ ಈ ವಾದ ಬಲವಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಪ್ರಜ್ಞಾಪೂರ್ವಕವಾಗಿ ಬೈಕ್ ಟ್ಯಾಕ್ಸಿಯನ್ನು ನಿರ್ಬಂಧಿಸಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಈ ಕುರಿತು ಪ್ರಶ್ನೆ ಮಾಡಿದ್ದು, ಮೇಲ್ಮನವಿ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular