HomeLatest NewsBIG NEWS: ಮಹಾಶಿವರಾತ್ರಿ ಸಂಭ್ರಮದ ವೇಳೆ ಈಶಾ ಫೌಂಡೇಶನ್ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

BIG NEWS: ಮಹಾಶಿವರಾತ್ರಿ ಸಂಭ್ರಮದ ವೇಳೆ ಈಶಾ ಫೌಂಡೇಶನ್ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ ಗೆ ಆಗಮಿಸಿದಾರೆ. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ ನಡುವೆ ಈಶಾ ಫೌಂಡೇಶನ್ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಶನ್ ನಲ್ಲಿ ಮಹಾಶಿವರಾತ್ರಿ ಸಡಗರ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಸೇರುತ್ತಿದ್ದಾರೆ. 112 ಅಡಿಯ ಆದಿಯೋಗಿ ಶಿವನ ದರ್ಶನಕ್ಕೆ ಭಕ್ತರು ಮುಗಿಬೀಳುತ್ತಿದ್ದಾರೆ. ಸುತ್ತಮುತ್ತ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಜನರು ಪರದಾಡುವಂತಾಗಿದೆ. ಈ ನಡುವೆ ಈಶಾ ಫೌಂಡೇಶನ್ ಬಳಿಯ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.

ಈಶಾಫೌಂಡೇಶನ್ ಬಳಿಯ ನಾಗಮಂಟಪದ ಎದುರುಗಡೆ ಇರುವ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಪ್ರದೇಶದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular