HomeLatest News43 ಎಸೆತಗಳಲ್ಲಿ 103 ರನ್ ಗಳಿಸಿದ ಇಶಾನ್ ಕಿಶನ್ ಚೊಚ್ಚಲ ಟಿ20 ಶತಕ

43 ಎಸೆತಗಳಲ್ಲಿ 103 ರನ್ ಗಳಿಸಿದ ಇಶಾನ್ ಕಿಶನ್ ಚೊಚ್ಚಲ ಟಿ20 ಶತಕ

ತಿರುವನಂತಪುರ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 46 ರನ್ ಗಳ ಗೆಲುವು ಸಾಧಿಸಿದ ಭಾರತ 4-1 ಅಂತರದಿಂದ ಸರಣಿ ಜಯಿಸಿದೆ.

ಭಾರತ ನೀಡಿದ 272 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 225 ರನ್ ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಐದು ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು. ಚೊಚ್ಚಲ ಅಂತರಾಷ್ಟ್ರೀಯ ಟಿ20 ಶತಕ ಗಳಿಸಿದ ಇಶಾನ್ ಕಿಶನ್ 43 ಎಸೆತಗಳಲ್ಲಿ ಆರು ಬೌಂಡರಿ, 10 ಸಿಕ್ಸರ್ ಸಹಿತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಸೂರ್ಯ ಕುಮಾರ್ ಯಾದವ್ ಆಕರ್ಷಕ ಅರ್ಧ ಶತಕ(63 ರನ್) ಸಿಡಿಸಿದರು. ಮೂರನೇ ವಿಕೆಟ್ ಗೆ ಈ ಜೋಡಿ 10 ಓವರ್ ಗಳಲ್ಲಿ 137 ರನ್ ಜತೆಯಾಟ ನೀಡಿತು.

ಗೆಲುವಿನ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 19.4 ಓವರ್ ಗಳಲ್ಲಿ 225 ರನ್ ಗೆ ಆಲ್ ಔಟ್ ಆಯ್ತು. ಫಿನ್ ಅಲೆನ್ 80, ರಚಿನ್ ರವೀಂದ್ರ 30 ರನ್ ಗಳಿಸಿದರು. ಆರ್ಷ್ ದೀಪ್ ಸಿಂಗ್ 5, ಅಕ್ಷರ್ ಪಟೇಲ್ 3 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular