HomeKarnatakaBIG NEWS: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್; ಅರಣ್ಯ ಸಚಿವರು ಹೇಳಿದ್ದೇನು?

BIG NEWS: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್; ಅರಣ್ಯ ಸಚಿವರು ಹೇಳಿದ್ದೇನು?

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದಲ್ಲಿ ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಂತೋಷ್ ಅವರ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾರೆ ಎಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವನ್ಯಜೀವಿಗಳ ಕಾನೂನಿನ ಆಧಾರದ ಮೇಲೆ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ ಪ್ರಕರಣದಲ್ಲಿ ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ. ತನಿಖೆ ನಡೆಸಿ ಹುಲಿ ಉಗುರು ಎಂಬುದನ್ನು ಗುರುತಿಸಿದ ಮೇಲೆಯೇ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular