ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 100 ಜನರು ಸಾವು

ಕೈರೊ: ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, 100 ಜನ ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ ಎಂದು ಸ್ಥಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಜಾದ ಮೇಲೆ ನಿಯಂತ್ರಣ ಸಾಧಿಸಲು ಇಸ್ರೇಲ್ ದಾಳಿ ನಡೆಸುತ್ತಿದ್ದು, ರಾತ್ರಿ ನಡೆದ ದಾಳಿಯಲ್ಲಿ 100 ಜನರು ಮೃತಪಟ್ಟಿದ್ದಾರೆ. ಇಸ್ರೇಲ್ ಬಾಂಬ್ ದಾಳಿಯಿಂದ ನಾಗರ್ಕ ನೋಂದಣಿಯ ದಾಖಲೆಯಲ್ಲಿರುವ ಹಲವು ಕುಟುಂಬಗಳೇ ನಾಶವಾಗಿವೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಸ್ರೇಲ್ ಒತ್ತೆಯಾಳುಗಳನ್ನು ಮುಕ್ತಗೊಳಿಸುವಂತೆ ಹಾಅಸ್ ಮೇಲೆ ಒತ್ತಡ ಹೇರಲು ಇಸ್ರೇಲ್ ಗಾಜಾಗೆ ವೈದ್ಯಕೀಯ, ಆಹಾರ ಮತ್ತು ಇಂಧನ ಸರಬರಾಜುಗಳನ್ನು ನಿರ್ಬಂಧಿಸಿದೆ. ಬದಲಾಗಿ ಪೂರ್ಣ ಗಾಜಾ ವಶಪಡಿಸಿಕೊಳ್ಳುವ ಜನರಿಗೆ ಸಹಾಯ ಮಾಡುವಂತೆ ಹೇಳಿದೆ.

ಇಸ್ರೇಲ್ ಕದನ ವಿರಾಮಕ್ಕೆ ಪ್ರತಿಯಾಗಿ ಮಾತ್ರ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿದೆ. ಅಮೆರಿಕದ ಬೆಂಬಲದೊಂದಿಗೆ ಈಜಿಪ್ಟ್ ಮತ್ತು ಕತಾರ್ ಮಧ್ಯವರ್ತಿಗಳಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಮಾತುಕತೆಯನ್ನು ಪ್ರಾರಂಭಿಸಿದ್ದು, ಮಾತುಕತೆಯಲ್ಲಿ ಪ್ರಗತಿಯಾಗಿಲ್ಲ ಎಂದು ಹೇಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read