ಇಸ್ರೇಲ್ –ಹಮಾಸ್ ಸಂಘರ್ಷ : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಉಡುಪಿ : ಇಸ್ರೇಲ್ ದೇಶದಲ್ಲಿ ಜಿಲ್ಲೆಯ ನಾಗರಿಕರಿದ್ದಲ್ಲಿ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077 ಹಾಗೂ 0820-2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read