HomeKarnatakaಇರಾನ್-ಇಸ್ರೇಲ್ ಬಿಕ್ಕಟ್ಟು: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಇರಾನ್-ಇಸ್ರೇಲ್ ಬಿಕ್ಕಟ್ಟು: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಇಸ್ರೇಲ್–ಇರಾನ್ ನಡುವಣ ಉದ್ವಿಗ್ನ ಪರಿಸ್ಥಿತಿ ಕಾರಣ ವಿಮಾನ ಹಾರಾಟ ರದ್ದಾಗಿದೆ. ವಿವಿಧ ದೇಶಗಳು ಜನರು ವಿಮಾನ ನಿಲ್ದಾಣ ಸೇರಿದಂತೆ ಮಧ್ಯ ಪ್ರಾಚ್ಯದ ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ. ಇವರಲ್ಲಿ ಕನ್ನಡಿಗರು ಸಹ ಇದ್ದಾರೆ.

ದೇಶಗಳು ತಮ್ಮ ವಾಯು ಪ್ರದೇಶದಲ್ಲಿ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಿದ್ದು, ಯಾವಾಗ ವಿಮಾನ ಹಾರಾಟ ಪುನಃ ಪ್ರಾರಂಭವಾಗಲಿದೆ? ಎಂಬುದು ಇನ್ನೂ ತಿಳಿದುಬಂದಿಲ್ಲ.

ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, ಸಂಬಂಧಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಜಿಲ್ಲಾಡಳಿತ ಸಹಾಯವಾಣಿ: ಹಾಸನ ಜಿಲ್ಲಾಡಳಿತ ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಇರಾನ್ ಹಾಗೂ ಇಸೇಲ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿದೆ ಎಂದು ಹೇಳಿದೆ.

ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ  ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ 08172-261111, ಟೋಲ್ ಫ್ರೀ 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಕನ್ನಡಿಗರ ರಕ್ಷಣೆಗೆ ಕ್ರಮ: ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ’ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

‘ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.

‘ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ’ ಎಂದು ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular