HomeIndiaಅಕ್ಟೋಬರ್ ನಿಂದ ಮೂರು ಭಾರೀ ಚಂಡಮಾರುತ ಸೃಷ್ಟಿ: ಮತ್ತೆ ಮಳೆ ಮುನ್ಸೂಚನೆ

ಅಕ್ಟೋಬರ್ ನಿಂದ ಮೂರು ಭಾರೀ ಚಂಡಮಾರುತ ಸೃಷ್ಟಿ: ಮತ್ತೆ ಮಳೆ ಮುನ್ಸೂಚನೆ

ನವದೆಹಲಿ: ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಹಿಂದೂ ಮಹಾ ಸಾಗರದ ಉತ್ತರ ಭಾಗದಲ್ಲಿ ಮೂರು ಭಾರಿ ಚಂಡಮಾರುತ ಸೃಷ್ಟಿಯಾಗಲಿವೆ ಎಂದು ಇಸ್ರೋ ವಿಜ್ಞಾನಿಗಳು ಮುನ್ಸೂಚನೆ ನೀಡಿದ್ದಾರೆ. ಈ ಮೂಲಕ ತೀವ್ರ ಬರದಿಂದ ಕಂಗೆಟ್ಟ ದೇಶಕ್ಕೆ ವರ್ಷಾಂತ್ಯದಲ್ಲಿ ಮಳೆಯ ಆಶಾಭಾವನೆ ಮೂಡಿದೆ.

ವರ್ಷಾಂತ್ಯದ ಕೊನೆಯ ಮೂರು ತಿಂಗಳು ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಚಂಡಮಾರುತ ಸೃಷ್ಟಿಯಾಗಿ ಮಳೆ ಆಗುವ ಸಾಧ್ಯತೆ ಇದೆ. ಎಲ್ ನಿನೋ ಪ್ರಭಾವದಿಂದ ಕಂಗೆಟ್ಟಿರುವ ದೇಶಕ್ಕೆ ಕೊನೆಯ ಮೂರು ತಿಂಗಳು ಮಳೆಯಾಗಬಹುದು ಎನ್ನುವ ಆಶಾಭಾವನೆ ಮೂಡಿದೆ.

ಸೈಕ್ಲೋನ್ ನಿರ್ದಿಷ್ಟವಾಗಿ ಎಲ್ಲಿ ಏಳುತ್ತದೆ ಎನ್ನುವ ಮಾಹಿತಿ ಇಲ್ಲ. ಚಂಡಮಾರುತಗಳು ಸೃಷ್ಟಿಯಾದರೆ ದಕ್ಷಿಣ ಭಾರತಕ್ಕೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂಗಾರು ಅವಧಿಯಲ್ಲಿ ಸಾಮಾನ್ಯವಾಗಿ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಹೆಚ್ಚಿನ ಚಂಡಮಾರುತ ಸೃಷ್ಟಿಯಾಗುತ್ತವೆ. ಚಂಡಮಾರುತ ಪರಿಣಾಮ ಪೂರಕ ಪರಿಸ್ಥಿತಿ ಸೃಷ್ಟಿಯಾದಲ್ಲಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಸದ್ಯದ ಅಂದಾಜಿನ ಪ್ರಕಾರ ಚಂಡಮಾರುತದ ಪರಿಣಾಮ ಗುಜರಾತ್ ಮತ್ತು ಮಹಾರಾಷ್ಟ್ರ ಕರಾವಳಿಯಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಇದೆ. ಇದು ಅಂದಾಜು ಅಷ್ಟೇ. ಭಾರಿ ಬರ ಎದುರಿಸುತ್ತಿರುವ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟೆಗಳಿಗೆ ನೀರು ಹರಿದು ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸೆ. 25 ರಿಂದ 27 ರವರೆಗೆ ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ” ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ: 25.09.2026 ರಿಂದ 27.09.2026ರವರೆಗೆ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026”ನ್ನು ರವೀಂದ್ರ ಕಲಾಕ್ಷೇತ್ರ ಆವರಣ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಏರ್ಪಡಿಸಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:22.09.2026  ರಂದು ಸಂಜೆ 5.00 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇವರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸಲ್ಲಿಸಲು ಕೋರಿದೆ. ಸೀಮಿತ ಮಳಿಗೆಗಳು ಲಭ್ಯವಿರುವುದರಿಂದ ಮೊದಲು ಪ್ರಾಧಿಕಾರದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

 ಹೆಚ್ಚಿನ ಮಾಹಿತಿಗಾಗಿ  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular