ಚಂದ್ರಯಾನ 3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದು, ವಿಜ್ಞಾನಿಗಳ ಸಾಧನೆ ಶ್ಲಾಘಿಸಿದ್ದಾರೆ.
ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ. ಭಾರತ ಹೆಮ್ಮೆಪಡುತ್ತದೆ. 45 ದಿನಗಳ ಐತಿಹಾಸಿಕ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ. 2.35ಕ್ಕೆ ಆಂಧ್ರದ ಶ್ರೀಹರಿಕೋಟಾದಿಂದ ಚಂದಿರನ ಅಂಗಳಕ್ಕೆ ನೌಕೆಯನ್ನು ಉಡ್ದಯನ ಮಾಡಿದ ಇಸ್ರೋ ಈ ಪ್ರಯತ್ನದಲ್ಲಿ ಪೂರ್ಣ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.
ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ. ಅದೇ ರೀತಿ, ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ. ಈ ಜಗತ್ತು, ಭಾರತವನ್ನು ಕರ್ನಾಟಕದ ಮೂಲಕ ನೋಡುವ ಈ ಅವಿಸ್ಮರಣೀಯ ಕ್ಷಣದ ದೃಶ್ಯವನ್ನು ನಾನೂ ಕಣ್ತುಂಬಿಕೊಂಡೆ ಎಂದು ತಿಳಿಸಿದ್ದಾರೆ.
ಉಡಾವಣೆಯಾದ ಕೆಲ ಕ್ಷಣಗಳಲ್ಲೇ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು, ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವ 6 ವಾರಗಳ ರೋಮಾಂಚನಕಾರಿ ಮಿಷನ್’ಗೆ ಚಾಲನೆ ದೊರೆತಿದೆ. ಇಸ್ರೋ ಅಧ್ಯಕ್ಷ ಡಾ. ಸೋಮನಾಥ್ ಸೇರಿ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, ಇತರೆ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.
ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ. ಅದೇ ರೀತಿ, ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ. ಈ ಜಗತ್ತು, ಭಾರತವನ್ನು ಕರ್ನಾಟಕದ ಮೂಲಕ ನೋಡುವ ಈ ಅವಿಸ್ಮರಣೀಯ ಕ್ಷಣದ ದೃಶ್ಯವನ್ನು ನಾನೂ ಕಣ್ತುಂಬಿಕೊಂಡೆ. 2/3
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 14, 2023
ಉಡಾವಣೆಯಾದ ಕೆಲ ಕ್ಷಣಗಳಲ್ಲೇ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು, ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವ 6 ವಾರಗಳ ರೋಮಾಂಚನಕಾರಿ ಮಿಷನ್'ಗೆ ಚಾಲನೆ ದೊರೆತಿದೆ. @isro ಅಧ್ಯಕ್ಷ ಡಾ.ಸೋಮನಾಥ್ ಸೇರಿ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, ಇತರೆ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು.3/3
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 14, 2023

