BREAKING : ‘ISRO’ ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಗೆ ಹೃದಯಾಘಾತ : ನಾರಾಯಣ ಹೃದಯಾಲಯಕ್ಕೆ ಏರ್ ಲಿಫ್ಟ್

‘ISRO’ ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಶ್ರೀಲಂಕಾದಲ್ಲಿ ಪ್ರಯಾಣಿಸುವಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಸದ್ಯ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಸ್ತೂರಿರಂಗನ್ ಅವರ ಆರೋಗ್ಯ ಮತ್ತು ಚಿಕಿತ್ಸೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಡಾ.ಕಸ್ತೂರಿರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್ಐಐಟಿ ವಿಶ್ವವಿದ್ಯಾಲಯಗಳೆರಡರಲ್ಲೂ ಮಾಜಿ ಕುಲಪತಿಯಾಗಿದ್ದಾರೆ. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಆಗಿದ್ದರು. ಹಾಗೆಯೇ ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read