ISRO Scientist : ಬೆಂಗಳೂರಿನಲ್ಲಿ ‘ಇಸ್ರೋ’ ವಿಜ್ಞಾನಿಯ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು : FIR ದಾಖಲು

ಬೆಂಗಳೂರು : ‘ಇಸ್ರೋ’ ಯುವ ವಿಜ್ಞಾನಿಯ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ 5 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌತನಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇಸ್ರೋದ ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ಹಿಂಬಾಲಿಸಿದ ಅಪರಿಚಿತ ದುಷ್ಕರ್ಮಿಗಳು ಕಾರ್ನ ಗ್ಲಾಸ್ ಒಡೆದು ಗೂಂಡಾಗಿರಿ ನಡೆಸಿದ್ದಾನೆ. ನಂತರ ಅಶುತೋಷ್ ಸಿಂಗ್ ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಅಶುತೋಷ್ ಸಿಂಗ್ ಮಾದನಾಯಕಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಇನ್ನೂ, ದೂರು ನೀಡಲು ಹೋದಾಗ ಪೊಲೀಸರು ಕೂಡ ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಟ್ವಿಟರ್ ಮೂಲಕ ಘಟನೆಯ ಮಾಹಿತಿಯನ್ನು ಅಶುತೋಷ್ ಸಿಂಗ್ ಹಂಚಿಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read