HomeUncategorizedBREAKING: ಸ್ನೇಹಿತನ ಮದುವೆಗೆ ಬಂದಿದ್ದಾಗ ದುರಂತ: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ನೀರಿನಲ್ಲಿ...

BREAKING: ಸ್ನೇಹಿತನ ಮದುವೆಗೆ ಬಂದಿದ್ದಾಗ ದುರಂತ: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಸ್ನೇಹಿತನ ಮದುವೆಗೆಂದು ಬಂದಿದ್ದ ಐಟಿ ಉದ್ಯೋಗಿಯೊಬ್ಬರು ಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಮೃತ ಯುವಕನನ್ನು ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಇವರು ಗದಗ ಮೂಲದವರು.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ. ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸ್ನೇಹಿತರು ಗೆಳೆಯನನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular