
ಈ ಬಗ್ಗೆ ಡಿಸಿಎಫ್ ರವೀಂದ್ರ ಸ್ಪಷ್ಟನೆ ನೀಡಿದ್ದು, ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಎಂಬುದು ಖಚಿತವಾಗಿದೆ. ಬಿಗ್ ಬಾಸ್ ಮನೆಗೆ ಹೋಗಿ ನಾವು ಅವರನ್ನು ಬಂಧಿಸಿದ್ದೇವೆ,ಹಣ ಕೊಟ್ಟು ಖರೀದಿಸಿದ ಬಗ್ಗೆ ಮಾಹಿತಿಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿಎಫ್ ರವೀಂದ್ರ ಹೇಳಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕತ್ತಿನಲ್ಲಿ ಚೈನು ಹಾಕಿಕೊಂಡಿದ್ದು, ಅದರಲ್ಲಿ ಹುಲಿ ಉಗುರು ಇದೆ . ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದಾರೆ.

