‘SSLC’ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಕುಳಿತು ಪರೀಕ್ಷೆ ಬರೆಯುವುದು ಕಡ್ಡಾಯ : ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : 2024ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ- 1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.

ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

ಈ ದಿಕ್ಕಿನಲ್ಲಿ ಕುಳಿತು ಪರೀಕ್ಷೆ ಬರೆದರೆ ಅಕ್ರಮ ಎಸಗಿದರೆ ದ್ವಾರದಲ್ಲೇ ಕಾಣುತ್ತದೆ, ಈ ನಿಟ್ಟಿನಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ. ಇನ್ನೂ, ಪರೀಕ್ಷಾ ಕೊಠಡಿ ಹಾಗೂ ಆವರಣದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಹಾಕಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಈಗಾಗಲೇ ಪರೀಕ್ಷೆಯ ಹಾಲ್ ಟಿಕೆಟ್ ನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಅಪ್ ಲೋಡ್ ಮಾಡಲಾಗಿದ್ದು, ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವಂತೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಯ ಭಾವಚಿತ್ರ, ಸಹಿ ಮತ್ತು ಇತರೆ ತಿದ್ದುಪಡಿಗಳಿದಲ್ಲಿ ಸೂಕ್ತ ದಾಖಲೆಗಳೊಂದಿಗೆ ಮಂಡಲಿಗೆ ಸಲ್ಲಿಸಿ ಸರಿಪಡಿಸಿಕೊಳ್ಳುವುದು. ಒಂದು ವೇಳೆ ಸರಿಪಡಿಸಿಕೊಳ್ಳದೇ ಇದ್ದಲ್ಲಿ ಇದರಿಂದ ವಿದ್ಯಾರ್ಥಿಗೆ ಮುಂದೆ ಅಂಕಪಟ್ಟಿಯಲ್ಲಾಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಲಿಯು ಇದರ ಜವಾಬ್ದಾರಿ ಹೊರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read