BIG NEWS : ಕನ್ನಡದಲ್ಲೇ ‘ಔಷಧಿ ಚೀಟಿ’ ಕಡ್ಡಾಯಗೊಳಿಸುವುದು ಕಷ್ಟಸಾಧ್ಯ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ.!

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವೈದ್ಯರು, ರೋಗಿಗಳು, ಶುಶ್ರೂಷಕರು, ಔಷಧಿ ವರ್ತಕರು ಮುಂತಾದ ಹತ್ತು ಹಲವು ಪ್ರಭಾ ಕೇಂದ್ರಗಳಿರುವ ಈ ವ್ಯವಸ್ಥೆಯ ಒಂದು ಕೊಂಡಿ ಸರಿಯಾಗಿ ಕನ್ನಡವನ್ನು ಅರ್ಥೈಸಿಕೊಳ್ಳುವುದರಲ್ಲಿ ಎಡವಿದರೂ, ರೋಗಿಗಳ ಜೀವನ್ಮರಣದ ಪ್ರಶ್ನೆಯಾಗುವ ಸಾಧ್ಯತೆಯೂ ಇದೆ.

ಜನರ ಆರೋಗ್ಯವನ್ನು ಕಾಯುವ ವೈದ್ಯಕೀಯ ವಿಜ್ಞಾನ ಕ್ಷೇತ್ರ ಅತ್ಯಂತ ವಿಶಾಲ ಮತ್ತು ಸಂಕೀರ್ಣವಾಗಿದ್ದು, ಪ್ರಮುಖ ಬದಲಾವಣೆಗಳ ಮುನ್ನ ಎಲ್ಲ ಭಾಗಿದಾರರುಗಳ ಜೊತೆಗೆ ಪೂರ್ವಸಂವಾದ ಅಗತ್ಯ ಎನ್ನುವುದು ನನ್ನ ಭಾವನೆ. ಇದು ಕೇವಲ ಒಂದು ಆದೇಶದ ಮೂಲಕ ಜಾರಿಗೆ ಬರುವ ವಿಚಾರವಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

https://twitter.com/KarnatakaVarthe/status/1834160342844280913?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read