HomeKarnatakaಕನ್ನಡ ರಾಜ್ಯೋತ್ಸವದಲ್ಲಿ ಎಲ್ಲಾ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವುದು ಕಡ್ಡಾಯ..!

ಕನ್ನಡ ರಾಜ್ಯೋತ್ಸವದಲ್ಲಿ ಎಲ್ಲಾ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವುದು ಕಡ್ಡಾಯ..!

ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಧ್ವಜಾರೋಹಣ ನೇರವೆರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 1 ರಂದು ಬೆಳಿಗ್ಗೆ 8.30 ಗಂಟೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಮತ್ತು ಸರ್ಕಾರಿ ನೌಕರರು ಉಪಸ್ಥಿತರಿರಬೇಕು. 8.55 ಕ್ಕೆ ಮುಖ್ಯ ಅತಿಥಿಗಳಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕ್ರೀಡಾಂಗಣಕ್ಕೆ ಆಗಮಿಸುವರು. ನಂತರ ಅವರು ರಾಷ್ಟ್ರ ಧ್ವಜಾರೋಹಣ ನೇರವೆರಿಸಿ, ವಿವಿಧ ದಳಗಳ ವೀಕ್ಷಣೆ ಮಾಡುವರು. ನಂತರ ಸಚಿವರು ಜಿಲ್ಲೆಯ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡುವರು. ಮತ್ತು 9.30 ಗಂಟೆಗೆ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸುವರು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಿ ಯಶಸ್ವಿಗೊಳಿಸಲು ವಿವಿಧ ಇಲಾಖೆಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರತಿ ಇಲಾಖೆಯು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತ್ತು ತಮ್ಮ ಇಲಾಖೆಗಳ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯೋತ್ಸವ ಕಾರ್ಯಕ್ರಮದ ಕವಾಯತ್ತು ಪ್ರದರ್ಶನದಲ್ಲಿ ಹಾಗೂ ಗೌರವ ರಕ್ಷೆ ನೀಡಲು ಆಯ್ಕೆಯಾಗುವ ದಳಗಳಿಗೆ ಅಕ್ಟೋಬರ್ 28 ರಿಂದ 30 ವರೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿ ನೀಡಲಾಗುವುದು. ಉತ್ತಮ ತಂಡಗಳನ್ನು ಅಂತಿಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು ಮತ್ತು ಉತ್ತಮ ಪ್ರದರ್ಶನ ನೀಡುವ ದಳಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಧಾರವಾಡ ಜಿಲ್ಲಾ ಕೇಂದ್ರದ ಎಲ್ಲ ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಾಂಕಾರ ಮಾಡಬೇಕು. ರಾಜ್ಯೋತ್ಸವ ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ ಮತ್ತು ಭಾಗವಹಿಸುವ ವಿದ್ಯಾರ್ಥಿಗಳಿಗೆ ಅಲ್ಪೋಪಹಾರದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಚಿವರ ಸಂದೇಶಕ್ಕೆ ಮಾಹಿತಿ: ನವೆಂಬರ್ 01 ರಂದು ಜರುಗುವ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣದ ನಂತರ ಜಿಲ್ಲೆಯ ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶವನ್ನು ನೀಡುತ್ತಾರೆ. ಈ ಸಂದೇಶಕ್ಕೆ ಅಗತ್ಯವಿರುವ ವಿವಿಧ ಇಲಾಖೆಗಳಲ್ಲಿನ ಪ್ರಗತಿ ವರದಿಯನ್ನು ಆಯಾ ಇಲಾಖಾ ಮುಖ್ಯಸ್ಥರು ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

ಜಿಲ್ಲಾ ಮಟ್ಟದ ಅಧಿಕಾರಿಗಳು, ತಮ್ಮ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿದ, ಇದುವರೆಗೆ ಸಾಧಿಸಿದ ಗುರಿ, ಸಾಧನೆ ಕುರಿತು ಸಂಕ್ಷಿಪ್ತವಾಗಿ ಒಂದು ಪ್ಯಾರಾಗ್ರಾಫ್ನಲ್ಲಿ ನುಡಿ ತಂತ್ರಾಂಶದಲ್ಲಿ ಮಾಹಿತಿಯನ್ನು ಅಕ್ಟೋಬರ್ 21, 2024 ರ ಮಧ್ಯಾಹ್ನ 12 ಗಂಟೆಯೊಳಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧಾರವಾಡ ಇವರಿಗೆ (ಸಾಫ್ಟ್ಕಾಪಿ ಮತ್ತು ಹಾರ್ಡ್ಕಾಪಿ) ಸಲ್ಲಿಸಬೇಕು. ಸಾಫ್ಟ್ಕಾಪಿಯನ್ನು ಇ-ಮೇಲ್ [email protected] ಗೆ ಕಳುಹಿಸಬೇಕು. ಮತ್ತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9538076619 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular