HomeLatest Newsಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ: ಮುಖ್ಯ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ: ಮುಖ್ಯ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದ ವಿವಿಧೆಡೆ ಸಾರ್ವಜನಿಕರ ಸಮಸ್ಯೆ ಹಾಗೂ ಕುಂದುಕೊರತೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಕರೆ ಮಾಡುವುದು ಅನಿವಾರ್ಯವಾಗಿರುತ್ತದೆ. ಕೆಲವು ಅಧಿಕಾರಿಗಳು ಜನಪ್ರತಿನಿಧಿಗಳನ್ನು ಕರೆ ಸ್ವೀಕರಿಸದೆ ನಿರ್ಲಕ್ಷಿಸುತ್ತಿರುವುದು, ತುರ್ತು ಸಂದರ್ಭದ ಕಾರ್ಯದಲ್ಲಿ ನಂತರವಾದರೂ ಸೌಜನ್ಯಕ್ಕೂ ಜನಪ್ರತಿನಿಧಿಗಳಿಗೆ ವಾಪಸ್ ಕರೆ ಮಾಡದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇನ್ನು ಮುಂದೆ ರಾಜ್ಯಮಟ್ಟದ ಅಧಿಕಾರಿಗಳು ಎಲ್ಲ ಜನ ಪ್ರತಿನಿಧಿಗಳ ಫೋನ್ ನಂಬರ್ ಗಳನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅವರು ಕರೆ ಮಾಡಿದಾಗ ತಪ್ಪದೆ ಸ್ವೀಕರಿಸಬೇಕು ಎಂದು ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular