HomeKarnatakaಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಸ್ತಿನ ಪಾಠ ಮಾಡಿದ್ದಾರೆ.

ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಎಲ್ಲಾ ಅಧಿಕಾರಿಗಳು ಬೆಳಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಜಿಲ್ಲಾ ಕೇಂದ್ರ ಕಚೇರಿಗೆ ಹಾಜರಾಗಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಇಲಾಖೆ ಆಡಳಿತ ಅಧಿಕಾರಿಗೆ ಸಂದೇಶ ಹೋಗಬೇಕು. ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್, ಕಂದಾಯ ಪರಿವೀಕ್ಷಕರು ಸೇರಿದಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಅವರವರ ಕಚೇರಿ ಮತ್ತು ಸಂಬಂಧಿಸಿದ ವೆಬ್ಸೈಟ್ ಗಳಲ್ಲಿ ಲಭ್ಯವಿರಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಒಂದೇ ಜಿಲ್ಲೆ ಅಥವಾ ಕಚೇರಿಗಳಲ್ಲಿನ ವಿವಿಧ ಹುದ್ದೆಗಳಲ್ಲಿ ಒಂದೇ ಜಾತಿಯ ಅಧಿಕಾರಿಗಳು ಇರುವಂತಿಲ್ಲ. ಅಧಿಕಾರಿಗಳಲ್ಲಿಯೂ ಸಾಮಾಜಿಕ ನ್ಯಾಯ ಇರಬೇಕು. ಬೇರೆಬೇರೆ ಜಾತಿ, ಧರ್ಮದವರು ಇರಬೇಕು. ಅಧಿಕಾರಿಗಳ ಹಂತದಲ್ಲಿ ಜಾತಿ ಲಾಬಿ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ತಾಲೂಕಿನಲ್ಲಿಯೂ ಸಚಿವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಪ್ರತಿ ಹೋಬಳಿ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆ ಬಗೆಹರಿಯಬೇಕು. ಮುಖ್ಯಮಂತ್ರಿಗಳ ಕಚೇರಿಯವರೆಗೂ ದೂರುಗಳು ಬರಬಾರದು. ಪ್ರತಿ ಜಿಲ್ಲೆಗೂ ಪ್ರವಾಸ ಮಾಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular