HomeLatest NewsBIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ :...

BIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಖಡಕ್ ಸೂಚನೆ

ಬೆಂಗಳೂರು :   ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.

. ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.

ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.

ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್ 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ನಗರದಲ್ಲಿರುವ 50 ಫೈ ಓವರ್‌ಗಳಲ್ಲಿ ಹೊಸ ವರ್ಷಾಚರಣೆ ದಿನ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.

ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವೀಲಿಂಗ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಣೆ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular