ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುಂಚಿತವಾಗಿ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮೊದಲು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.
ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ಹಾಗೂ ಬಣ್ಣ ಲೇಪಿತವಲ್ಲದ ವಿಗ್ರಹಗಳನ್ನು ಬಳಸುವುದು. ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸುವುದು.
ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ವಿಗ್ರಹ ಪ್ರ್ರತಿಷ್ಠಾಪಿಸಿ ಪೂಜೆ ನಡೆಸಲು ಇಚ್ಚಿಸುವವರು ಅಗತ್ಯ ದಾಖಲಾತಿಗಳನ್ನು ನಗರಸಭೆ, ಪೋಲೀಸ್ ಇಲಾಖೆ, ಅಗ್ನಿ ಶಾಮಕ, ಸೆಸ್ಕ್ ಹಾಗೂ ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದು ಪ್ರತಿಷ್ಠಾಪಿಸುವಂತೆ ಮಡಿಕೇರಿ ನಗರಸಭೆ ಪೌರಾಯುಕ್ತರು ಮನವಿ ಮಾಡಿದ್ದಾರೆ.