HomeLatest Newsರಾಜ್ಯದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ವಿಳಂಬವಿಲ್ಲದೆ, ಹಣಕ್ಕೆ ಒತ್ತಾಯಿಸಿದೆ ಚಿಕಿತ್ಸೆ ಕಡ್ಡಾಯ: ಇಲ್ಲದಿದ್ದಲ್ಲಿ ದಂಡ, ಜೈಲು, ಶಿಸ್ತು...

ರಾಜ್ಯದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ವಿಳಂಬವಿಲ್ಲದೆ, ಹಣಕ್ಕೆ ಒತ್ತಾಯಿಸಿದೆ ಚಿಕಿತ್ಸೆ ಕಡ್ಡಾಯ: ಇಲ್ಲದಿದ್ದಲ್ಲಿ ದಂಡ, ಜೈಲು, ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರು, ಸುಟ್ಟ ಗಾಯಾಳುಗಳು, ಅಪರಾಧ ಕಾನೂನು ಸಂಘರ್ಷದಂತಹ ಪ್ರಕರಣದಲ್ಲಿ(ಸಂಭಾವ್ಯ ಸೇರಿ) ರಾಜ್ಯದ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸಿದೆ ವಿಳಂಬ ಮಾಡದೆ ಮೊದಲು ಚಿಕಿತ್ಸೆ ನೀಡಬೇಕು ಎಂದು ಸರ್ಕಾರ ಮತ್ತೆ ಸೂಚನೆ ನೀಡಿದೆ.

ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ನೋಂದಣಿಯಾದ ಎಲ್ಲಾ ವೈದ್ಯರು, ವೈದ್ಯಕೀಯ ಸಂಸ್ಥೆಗಳು ವಿಳಂಬ ಮಾಡದೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನಿರಾಕರಿಸದೆ ಮೊದಲು ಪ್ರಾಥಮಿಕ ಚಿಕಿತ್ಸೆ ನೀಡಿ ಆರೋಗ್ಯ ಸ್ಥಿರವಾಗುವಂತೆ ನೋಡಿಕೊಳ್ಳಬೇಕು. ಸೌಲಭ್ಯ ಕೊರತೆ ಇದ್ದಲ್ಲಿ ಸಮೀಪದ ಆಸ್ಪತ್ರೆಗಳಿಗೆ ವರ್ಗಾಯಿಸುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ಸಂಪೂರ್ಣ ವೈದ್ಯಕೀಯ ವಿವರದೊಂದಿಗೆ ಕಳುಹಿಸಿಕೊಡಬೇಕು. ಇಲ್ಲದಿದ್ದಲ್ಲಿ ದಂಡ, ಜೈಲು ಶಿಕ್ಷೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಅಪಘಾತಕ್ಕೀಡಾದವರ ಚಿಕಿತ್ಸೆಯ ಬಗ್ಗೆ ಪುನರುಚ್ಚರಣೆ ಮತ್ತು ನಿರ್ದೇಶನಗಳ ಕುರಿತು ಸರ್ಕಾರಿ ಸುತ್ತೋಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular