HomeLatest Newsಸರ್ಕಾರಿ ಶಾಲೆ ಮುಚ್ಚುವುದು ಸರಿಯಲ್ಲ, ಬೇಕಾದ ವ್ಯವಸ್ಥೆ ಕಲ್ಪಿಸಬೇಕು: ರಿಷಬ್ ಶೆಟ್ಟಿ

ಸರ್ಕಾರಿ ಶಾಲೆ ಮುಚ್ಚುವುದು ಸರಿಯಲ್ಲ, ಬೇಕಾದ ವ್ಯವಸ್ಥೆ ಕಲ್ಪಿಸಬೇಕು: ರಿಷಬ್ ಶೆಟ್ಟಿ

ಬೆಂಗಳೂರು: ಮಕ್ಕಳ ಸಂಖ್ಯೆ ಇಲ್ಲವೆನ್ನುವ ಕಾರಣಕ್ಕೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಏಕೆ ಇಲ್ಲ ಎಂಬುದನ್ನು ಮನಗಂಡು ಅಗತ್ಯವಿರುವ ವ್ಯವಸ್ಥೆ ಕಲ್ಪಿಸಬೇಕು. ಶಿಕ್ಷಕರ ಕೊರತೆ ನೀಗಿಸೋಬೇಕು ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ಯೂತ್ ಫಾರ್ ಸೇವಾ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಸ್ವಯಂಸೇವಕ ವರ್ಷದ ಉದ್ಘಾಟನಾ ಸಮಾರಂಭದಲ್ಲಿ ಯೂತ್ ಫಾರ್ ಸೇವಾ ರಾಯಭಾರಿಯೂ ಆಗಿರುವ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ನೀಡುವ ಗುಣಮಟ್ಟದ ಶಿಕ್ಷಣ ಪಡೆದವರು ಸಮಾಜದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುವುದು ಕಷ್ಟವಾಗುತ್ತದೆ ಎನ್ನುವ ಯೋಚನೆ ಬದಲಾಯಿಸಲು ಯುವ ಸಮುದಾಯ ಕೈಜೋಡಿಸಬೇಕು. ನಾನು ಓದಿದ ಶಾಲೆಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುತ್ತಿದ್ದೇನೆ. ಅದೇ ರೀತಿ ಯುವಕರು ಕೈಜೋಡಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular