HomeKarnatakaವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ-ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದ ಅಧಿಕಾರಿ ಮಹೇಶ್ ಎಂಬುವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇ.ಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದ್ದ ಸುಮಾರು ರೂ. 46 ಕೋಟಿ ಸ್ಥಗಿತಗೊಳಿಸಲಾಗಿದೆ.

ಪ್ರಕರಣದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ವಿರೊಧ ಪಕ್ಷಗಳ ಸದಸ್ಯರು ನಿಯಮ 69ರ ಅಡಿಯಲ್ಲಿ 7 ತಾಸಿಗೂ ಅಧಿಕ ಕಾಲ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೆ ಅಭಿಪ್ರಾಯ ವ್ಯಕ್ತಪಡಿಸಲು ಇರುವ ಅವಕಾಶದಷ್ಟೇ, ಸರ್ಕಾರಕ್ಕೂ ತನ್ನ ನಿಲುವು ವ್ಯಕ್ತಪಡಿಸಲು ಹಕ್ಕಿದೆ. ಆದರೆ ವಿಪಕ್ಷಗಳಿಗೆ ನಮ್ಮ ಉತ್ತರದ ಅಗತ್ಯವಿಲ್ಲ, ಅವರಿಗೆ ಬೇಕಿರುವುದು ಕೇವಲ ರಾಜಕೀಯ ಟೀಕೆ ಮಾತ್ರ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಎಸ್ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ವೈಯಕ್ತಿಕವಾಗಿ ನನ್ನ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧ ಪಕ್ಷಗಳು ಮಾಡುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸುಪರಿಡೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳು ಇದ್ದಾರೆ. ತನಿಖೆ ಅತ್ಯಂತ ದಕ್ಷವಾಗಿ, ವಸ್ತುನಿಷ್ಠವಾಗಿ ನಡೆಯುತ್ತಿದ್ದು ನನಗೆ ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಈ ವರೆಗೆ ಮುಟ್ಟುಗೋಲು ಹಾಕಿಕೊಂಡಿರುವ ಹಣದ ವಿವರವನ್ನು ಸದನಕ್ಕೆ ನೀಡಿ, ಅವ್ಯವಹಾರದಿಂದ ಭ್ರಷ್ಟರ ಪಾಲಾಗಿರುವ ಅಷ್ಟೂ ಹಣವನ್ನು ಮರಳಿ ಅರ್ಹರಿಗೆ ತಲುಪಿಸುವ ವಾಗ್ದಾನ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular