HomeIndiaBIG NEWS: ಐಟಿ ಕಚೇರಿಯಲ್ಲಿ ಬೆಂಕಿ ಅವಘಡ; 7 ಜನರ ರಕ್ಷಣೆ; ಓರ್ವನಿಗೆ ಗಂಭೀರ ಗಾಯ

BIG NEWS: ಐಟಿ ಕಚೇರಿಯಲ್ಲಿ ಬೆಂಕಿ ಅವಘಡ; 7 ಜನರ ರಕ್ಷಣೆ; ಓರ್ವನಿಗೆ ಗಂಭೀರ ಗಾಯ

ನವದೆಹಲಿ: ದೆಹಲಿಯ ಐಟಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ದೆಹಲಿಯ ಹಳೇ ಪೊಲೀಸ್ ಹೆಡ್ ಕ್ವಾರ್ಟರ್ಸ್ ಎದುರು ಇರುವ ಐಟಿ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

21 ಅಗ್ನಿಶಾಮಕ ವಾಹನಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ. ಕಟ್ಟಡದ ಒಳಗೆ ಸಿಲುಕಿದ್ದ 7 ಜನರನ್ನು ರಕ್ಷಿಸಲಾಗಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular