HomeKarnatakaBIG NEWS: ಸಂಸದ ಡಿ.ಕೆ.ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ನಿವಾಸದ ಮೇಲೆ ಐಟಿ ದಾಳಿ; ಕಾಂಗ್ರೆಸ್...

BIG NEWS: ಸಂಸದ ಡಿ.ಕೆ.ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ನಿವಾಸದ ಮೇಲೆ ಐಟಿ ದಾಳಿ; ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಆಪ್ತ ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಕೋಣನಕುಂಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ.

ಕಾಂಗ್ರೆಸ್ ನಾಯಕರ ಮನೆ ಮೇಲಿನ ಐಟಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಡಿ.ಕೆ ಸುರೇಶ್ ಅವರನ್ನು ಟಾರ್ಗೆಟ್ ಮಾಡಿ ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ನಡೆಸಲಾಗಿದ್ದು, ಇದು ಡಿ.ಕೆ.ಸುರೇಶ್ ಅವರನ್ನು ಕಟ್ಟಿಹಾಕುವ ಯತ್ನ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಕಾರ್ಪೊರೇಟರ್ ಗಂಗಾಧರ್ ಹಾಗೂ ಶ್ರೀಧರ್ ನಿವಾಸದ ಬಳಿ ಜಮಾವಣೆಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಐಟಿ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕಕಾಲದಲ್ಲಿ ಒಟ್ಟು 6 ಕಡೆ 10ಕ್ಕೂ ಹೆಚ್ಚಿ ಐಟಿ ಅಧಿಕರಿಗಳ ತಂಡ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ.

For Latest News Updates, Join Our Whatsapp Community🚩
RELATED ARTICLES

Most Popular